Saturday, August 22, 2026

BDA Apartments

Home Crime ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು.

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು.

ಹಾಸನ,ಜನವರಿ,2,2023(www.justkannada.in): ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ.

ತಾಯಿ ಶಿವಮ್ಮ(37) ಸಿಂಚು(7), ಪವನ್(10) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿ  ರಾತ್ರಿ ಗಂಡ ಮನೆಯಲ್ಲಿ ಇಲ್ಲದಿದ್ದಾಗ ಗ್ಯಾಸ್ ಆನ್ ಮಾಡಿ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಶಿವಮ್ಮ ಪತಿ ತೀರ್ಥ  ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ಸೋಮವಾರ ಸಂಜೆ ಪತ್ನಿಗೆ ದೂರವಾಣಿ ಕರೆ ಮಾಡಿದ್ದು,  ಫೋನ್ ಕರೆಯನ್ನೂ ಸ್ವೀಕರಿಸಲಿಲ್ಲ.  ನಂತರ ಮನೆಗೆ ಬಂದು ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಇನ್ನು ಸಾವಿಗೆ ಕಾರಣ ತಿಳಿದು ಬಂದಿಲ್ಲ. ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Key words: Mother-commits-suicide -two children.