ಸ್ವಂತ ಮಗುವನ್ನೆ ಹತ್ಯೆಗೈದು ಸೂಟ್ ಕೇಸ್ ನಲ್ಲಿ ಶವವಿಟ್ಟು ಸಾಗಿಸುತ್ತಿದ್ದ ತಾಯಿ ಅರೆಸ್ಟ್.

ಚಿತ್ರದುರ್ಗ, ಜನವರಿ,9,2024(www.justkannada.in):  ಸ್ವಂತ 4 ವರ್ಷದ ಮಗುವನ್ನೆ ಹತ್ಯೆಗೈದು ಸೂಟ್ ಕೇಸ್ ಶವವಿಟ್ಟು  ಸಾಗಿಸುತ್ತಿದ್ದ ತಾಯಿಯನ್ನ  ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಬಂಧಿತ ಆರೋಪಿ. ಈಕೆಯ ವಿರುದ್ದ ಗೋವಾದ ಹೋಟೆಲ್​ವೊಂದರಲ್ಲಿ ತನ್ನ ಮಗುವಿನ ಹತ್ಯೆ  ಮಾಡಿರುವ ಆರೋಪ ಕೇಳಿ ಬಂದಿದೆ. ಗೋವಾದ ಹೋಟೆಲ್​ನಲ್ಲಿ ತಂಗಿದ್ದ ಸುಚನಾ ಸೇಠ್ ಹೋಟೆಲ್​ನಲ್ಲಿ ತಮ್ಮ ಮಗನ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ  ಗೋವಾದ ಹೋಟೆಲ್ ​ನಲ್ಲಿ  ತಂಗಿದ್ದು, ಇನ್ನೇನು ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಿದ್ದ ವೇಳೆ  ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆ ವೇಳೆ ಸುಚನಾ ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ. ಈ ವೇಳೆ ಅನುಮಾನಗೊಂಡ ಹೋಟೆಲ್​ ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆ ಆಗಿವೆ. ಈ ಸಮಯದಲ್ಲಿ ತಕ್ಷಣ ಹೋಟೆಲ್  ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ನಂಬರ್ ಹುಡುಕಿ ಸುಚನಾ ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಡ್ರೈವರ್​ಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದು, ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದಾರೆ. ಬಳಿಕ ಐಮಂಗಲ ಪೊಲೀಸರಿಗೆ ಆರೋಪಿ ಸುಚನಾಳನ್ನು ಒಪ್ಪಿಸಿದ್ದಾರೆ ಎನ್ನಲಾಗಿದೆ.

ಕಾರ್​ ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಶಿಫ್ಟ್ ಮಾಡಿ ಆರೋಪಿ ಸುಚನಾಳನ್ನ ವಶಕ್ಕೆ ಪಡೆಯಲಾಗಿದೆ.  ಘಟನೆ ಸಂಬಂಧ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಲು ಸಿದ್ದತೆ ನಡೆದಿದೆ.

Key words:  mother- killed – child – suit case -body -arrested.