ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ.

ಬೀದರ್,ಜನವರಿ,18,2023(www.justkannada.in):  ತನ್ನ ಇಬ್ಬರು ಮಕ್ಕಳನ್ನ ಕೊಂದ ತಾಯಿ  ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆ ಬಾಲ್ಕಿ ತಾಲ್ಲೂಕಿನ ನೀಲಮ್ಮನಹಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮೀರಾಬಾಯಿ(25) ನಚ್ಚುಬಾಯಿ(3), ಗೋಲುಬಾಯಿ(2) ಮೃತಪಟ್ಟವರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ ಮೀರಬಾಯಿ ತನ್ನಿಬ್ಬರ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಧನ್ನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words:  mother – killed – two children – committed- suicide.