ಬ್ರಿಟನ್ 2ನೇ ಎಲಿಜಬೆತ್ ಗೌರವಾರ್ಥ ಇಂದು ದೇಶಾದ್ಯಂತ ಶೋಕಾಚರಣೆ

ಬೆಂಗಳೂರು, ಸೆಪ್ಟೆಂಬರ್ 11, 2022 (www.justkannada.in): ಬ್ರಿಟನ್‌ನ 2ನೇ ಎಲಿಜಬೆತ್ ಅವರ ಗೌರವಾರ್ಥ ಭಾರತದಲ್ಲಿ ಇಂದು ಶೋಕಾಚರಣೆ ಘೋಷಿಸಲಾಗಿದೆ.

ಶೋಕಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆ ಮತ್ತು ರಾಷ್ಟ್ರಪತಿ ಭವನ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ.

‘ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ’ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಎಲಿಜಬೆತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬ್ರಿಟನ್‌ನ ರಾಣಿ, 96 ವರ್ಷ ವಯಸ್ಸಿನ 2ನೇ ಎಲಿಜಬೆತ್ ಗುರುವಾರ ರಾತ್ರಿ ನಿಧನರಾದರು. ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಅವರದು.