ಬೆಂಗಳೂರು,ನವೆಂಬರ್,18,2025 (www.justkannada.in): ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸೌಹಾರ್ದತೆಯಿಂದ ಅನುಮತಿ ಪಡೆಯಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ನವರು ಪಾದಯಾತ್ರೆ ಮಾಡದಿದ್ದರೆ ಇಷ್ಟೋತ್ತಿಗೆ ಯೋಜನೆ ಒಂದು ಹಂತಕ್ಕೆ ತಲುಪುತಿತ್ತು. ಇವರು ಪಾದಯಾತ್ರೆ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡಿನವರು ಮಿಸ್ ಲೀನಿಯಸ್ ಕೇಸ್ ಹಾಕಿದ್ದಾರೆ. ನಾವು ಬಹಳ ಬುದ್ದಿವಂತಿಕೆಯಿಂದ ಎಲ್ಲ ಹಂತಗಳನ್ನು ಮುಗಿಸಿಕೊಳ್ಳಬೇಕು. ಯಾಕೆಂದರೆ ಈಗ ನಡೆಯುವ ಬೆಳವಣಿಗೆಯಲ್ಲಿ ಏನಾದರೂ ವ್ಯತ್ಯಾಸವಾದರೆ ತಮಿಳುನಾಡಿನವರು ಮತ್ತೆ ಕೋರ್ಟ್ ಗೆ ಹೋಗುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
Key words: Mekedatu project. Permission, political ambition, MP, Basavaraj Bommai







