Wednesday, August 12, 2026

BDA Apartments

Home Front Page ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ.

ಬೆಂಗಳೂರು,ಮಾರ್ಚ್,21,2024(www.justkannada.in):  ಚುನವಣೆ ಹೊಸ್ತಿಲಲ್ಲಿ ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್ ಬಚ್ಚೇಗೌಡ ಶಾಕ್ ನೀಡಿದ್ದು, ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ  ಸಂಸದ ಬಿಎನ್ ಬಚ್ಚೇಗೌಡ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷದ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Key words: MP -BN Bachegowda-resigns –BJP- primary membership