ರೈತರಿಗೆ ಬೆಳೆ ಪರಿಹಾರ ಕೊಡಿ- ಸಿಎಂ ಸಿದ್ದರಾಮಯ್ಯಗೆ ಸಂಸದ ಬೊಮ್ಮಯಿ ಪತ್ರ

ಬೆಂಗಳೂರು, ನವೆಂಬರ್‌ 20,2025 (www.justkannada.in):  ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ  ರೈತರ ಬೆಳೆ ನಾಶವಾಗಿದೆ.  ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಬಸವರಾಜ ಬೊಮ್ಮಾಯಿ, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲ.

ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮರ್ಪಕವಾಗಿ ನ್ಯಾಯ ಸಮ್ಮತವಾಗಿ ನಡೆದಿರುವುದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಹಲವಾರು ತಾಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ 10 % ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಇದು ಸತ್ಯಕ್ಕೆ ದೂರವಾಗಿದೆ. ಕೆಲವು ತಾಲೂಕುಗಳಲ್ಲಿ ನಷ್ಟವೇ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಬೆಳೆ ನಷ್ಟ ಸರ್ವೆಯಲ್ಲಿ ಆಗಿರುವ ದೋಷವನ್ನ ಸರಿಪಡಿಸಿ  ಕೂಡಲೇ ಎಲ್ಲ ರೈತರಿಗೂ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ವಹಿಸಬೇಕು ಎಂದು ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.

Key words: crop compensation, farmers, MP, Bommai, letter, CM, Siddaramaiah