ಸಾರ್ವಜನಿಕರ ಯೋಜನೆ ಅನುಷ್ಠಾನದಲ್ಲಿ ವೇಗ, ಪಾರದರ್ಶಕತೆ, ಗುಣಮಟ್ಟ ಕಾಪಾಡಿಕೊಳ್ಳಿ- ಸಂಸದ ಡಾ.ಸಿ.ಎನ್ ಮಂಜುನಾಥ್

ರಾಮನಗರ,ಡಿಸೆಂಬರ್,29,2025 (www.justkannada.in): ಸಾರ್ವಜನಿಕರಿಗೆ ನೇರವಾಗಿ ಲಾಭ ತಲುಪುವ ಯೋಜನೆಗಳ ಅನುಷ್ಠಾನದಲ್ಲಿ ವೇಗ, ಪಾರದರ್ಶಕತೆ ಹಾಗೂ ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳಿಗೆ  ಸ್ಪಷ್ಟ ಸೂಚನೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್. ಮಂಜುನಾಥ್ ಸೂಚನೆ ನೀಡಿದರು.

ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2025–26ನೇ ಸಾಲಿನ ದಿಶಾ (DISHA) ಪ್ರಗತಿ ಪರಿಶೀಲನಾ ಸಭೆಯು ಸಂಸದ ಡಾ. ಸಿ. ಎನ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ಇಲಾಖಾವಾರು ಸಮಗ್ರವಾಗಿ ಚರ್ಚಿಸಲಾಯಿತು.

ಸಾರ್ವಜನಿಕರಿಗೆ ನೇರವಾಗಿ ಲಾಭ ತಲುಪುವ ಯೋಜನೆಗಳ ಅನುಷ್ಠಾನದಲ್ಲಿ ವೇಗ, ಪಾರದರ್ಶಕತೆ ಹಾಗೂ ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಜೊತೆಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ದಿಶಾ ಸಮಿತಿ ಸದಸ್ಯರು ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: DISHA, Meeting, MP, Dr. C.N. Manjunath