ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವ ವ್ಯಕ್ತಿ ಅಲ್ಲ- ಸಂಸದ ಜಗದೀಶ್ ಶೆಟ್ಟರ್

ಚಾಮರಾಜನಗರ, ಅಕ್ಟೋಬರ್,28,2025 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನರಚನೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ನಿನ್ನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಿರ್ಧರಿಸಿದರೇ ನಾನೇ ಪೂರ್ಣಾವಧಿ ಸಿಎಂ ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು. ಬಳಿಕ ಈ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿ ತಮ್ಮ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ಕುರಿತು ಇದೀಗ ಬಿಜೆಪಿ ಸಂಸದ, ಮಾಜಿ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್,  ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಮ ಆಗಿರುತ್ತಾರೆ.  ಬಂಡಾಯ ಏಳುತ್ತಾರೆ.  ಮತ್ತೆ  ಸತೀಶ್ ಜಾರಕಿಹೊಳಿಯನ್ನ ಮುನ್ನೆಲೆಗೆ ತರುತ್ತಾರೆ .

ಜೊತೆಗೆ ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯ ಉದ್ದೇಶ ಡಿಕೆ ಶಿವಕುಮಾರ್ ಸಿಎಂ ಆಗಬಾರದು ಎಂದು ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.

Key words: Siddaramaiah,  not, give, power, MP, Jagadish Shettar