Friday, August 21, 2026

BDA Apartments

Home Front Page ಕೇಂದ್ರ ಸರ್ಕಾರದ ಅನುದಾನ ಬಳಕೆ ಕುರಿತು ಸಂಸದ ಪ್ರತಾಪ್ ಸಿಂಹ ಅಸಮಾಧಾನ: ಜಿಲ್ಲಾಧಿಕಾರಿಗೆ ಪತ್ರ…

ಕೇಂದ್ರ ಸರ್ಕಾರದ ಅನುದಾನ ಬಳಕೆ ಕುರಿತು ಸಂಸದ ಪ್ರತಾಪ್ ಸಿಂಹ ಅಸಮಾಧಾನ: ಜಿಲ್ಲಾಧಿಕಾರಿಗೆ ಪತ್ರ…

ಮೈಸೂರು,ಸೆಪ್ಟಂಬರ್,9,2020(www.justkannada.in):  ಕೇಂದ್ರ ಸರ್ಕಾರದ ಅನುದಾನ ಬಳಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅನುದಾನಗಳ ಹಣವನ್ನು ನಿರ್ದಿಷ್ಟ ಕಾಮಗಾರಿಗಳಿಗೆ ಮಾತ್ರವೇ ಬಳಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ.mp-pratap-simha-central-government-grants-letter-dc

ಈ ಕುರಿತು ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಂಸದ ಪ್ರತಾಪ್ ಸಿಂಹ, 14 ನೇ ಹಣಕಾಸು ಯೋಜನೆ ಉಳಿಕೆ 09.30 ಕೋಟಿ ಹಣ ಹಾಗೂ 15 ನೇ ಹಣಕಾಸು ಯೋಜನೆಯಲ್ಲಿ ಬಿಡುಗಡೆಯಾಗಿರುವ 69.39 ಕೋಟಿ ಹಣವನ್ನು ಅತ್ಯವಶ್ಯಕ ಕಾಮಗಾರಿಗಳಿಗೆ ಬಳಸಿಕೊಳ್ಳಬೇಕು. ಅನುದಾನವನ್ನು ವಿದ್ಯಾರಣ್ಯಪುರಂ, ರಾಯನಕೆರೆ ಹಾಗೂ ಕೆಸರೆ ಘನ ತ್ಯಾಜ್ಯ ಘಟಕಕ್ಕೆ ಬಳಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಹಾಗೆಯೇ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ  ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಈ ಹಿಂದಿನಿಂದ ಮೇಯರ್ ಉಪಮೇಯರ್  ವಾರ್ಕ್ಸ್ ಸಮಿತಿ ಸದಸ್ಯರು, ಮಾಜಿ ಮೇಯರ್ ಗಳು ಪಾರ್ಟಿ ಲೀಡರ್ಸ್ ಗಳು ನಿಯಮಾವಳಿಗಳನ್ನು ಉಲ್ಲಂಘಿಸಿ ಹೊಂದಾಣಿಕೆ ರಾಜಕಾರಣಗಳ ಮೂಲಕ  ಸಿಂಹಪಾಲನ್ನು ಪಡೆದುಕೊಳ್ಳುವಂತಹ ಅನಧಿಕೃತ ವ್ಯವಸ್ಥೆಯನ್ನು ಪಾಲಿಸಿಕೊಂಡು ಬಂದಿದ್ದಾರೆ.mp-pratap-simha-central-government-grants-letter-dc

ಇಂತಹ ಹೊಂದಾಣಿಕೆ ವ್ಯವಸ್ಥೆಯನ್ನು ಅಂತ್ಯಗೊಳಿಸಿ ಶೇ. 50 ರಷ್ಟು ಅನುದಾನ ರೂ.34.70 ಕೋಟಿ ಹಾಗೂ 14ನೇ ಹಣಕಾಸು ಯೋಜನೆಯ ಉಳಿಕೆಯಾಗಿರುವ ರೂ.9.30 ಕೋಟಿ ಹಣವನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಿಯಮಾವಳಿ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವರು ಸಂಸದರು, ಶಾಸಕರು ಹಾಗೂ ಪಾಲಿಕೆ ಸದಸ್ಯರ ಅಭಿಪ್ರಾಯವನ್ನ ಪಡೆದು  ಅನುದಾನ ವಿನಿಯೋಗ ಮಾಡುವುದು ಕೇಂದ್ರ ಸರ್ಕಾರದ ಈ ಅನುದಾನವನ್ನು ಯಾವುದೇ ಕಾರಣಕ್ಕೂ  ವೃತ್ತಗಳು ಸ್ಮಶಾನ ಅಭಿವೃದ್ಧಿ ಕಾಮಗಾರಿಗೆ ಪೋಲು ಮಾಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

Key words: MP Pratap simha- central government- grants- Letter -DC