ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ.

ರಾಮನಗರ,ಜನವರಿ,12,2024(www.justkannada.in): ಈಗಿನಿಂದಲೇ ಲೋಕಸಭೆ ಚುನಾವಣೆ  ರಾಜಕೀಯ ಚಟುವಟಿಕೆ ಗರಿಗೆದರುತ್ತಿದ್ದು ಈ ನಡುವೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.

ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಹೆಚ್ ಡಿಕೆ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ  ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ವಿಚಾರವಾಗಿ, ಲೋಕಸಭೆ ಎಲೆಕ್ಷನ್ ಗೆ ಸಹಕಾರ ನೀಡುವಂತೆ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

Key words: MP- Pratap Simha- -met- Former CM -HD Kumaraswamy