ಸಂಸದ ಪ್ರತಾಪ್ ಸಿಂಹ ಹೆಸರು ಬದಲಾವಣೆ ಬಗ್ಗೆ ವ್ಯಂಗ್ಯ: ಈ ಬಾರಿ 2 ಲಕ್ಷ ಅಂತರದಲ್ಲಿ ಸೋಲುತ್ತಾರೆ ಎಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್.

ಮೈಸೂರು,ನವೆಂಬರ್,29,2023(www.justkannada.in): ಸಂಸದ ಪ್ರತಾಪ್ ಸಿಂಹ ತಮ್ಮ ಹೆಸರನ್ನು ಇತ್ತೀಚೆಗೆ ಬದಲಾವಣೆ ಮಾಡಿಕೊಂಡಿದ್ದಾರೆ. ಪ್ರತಾಪ್ ಸಿಂಹ ಅವರಿಗೆ ಸೋಲಿನ ಭೀತಿ ಕಾಡುತ್ತಿದೆ. ಇನ್ನೊಂದು ‘M’ ಅನ್ನು  ಸೇರಿಸಿಕೊಂಡಿದ್ದಾರೆ. ‘M’ ಅಂದರೆ mockery ಅಪಹಾಸ್ಯ  ಪ್ರತಾಪ್ ಸಿಂಹ ಅಂತ ಹೇಳಬಹುದು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯವಾಡಿದರು.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್,  ಪ್ರತಾಪ್ ಸಿಂಹ 2 ಲಕ್ಷ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಅದು ಉಲ್ಟಾ ಆಗುತ್ತೆ. 2 ಲಕ್ಷ ಅಂತರದಲ್ಲಿ ಸೋಲುತ್ತಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ತಂದ ಯೋಜನೆಗಳನ್ನ ನಾನು ತಂದೆ ಅಂತ ಹೇಳಿಕೊಳ್ಳುತ್ತಾ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೇಂದ್ರದಿಂದ ನೀವು ಏನು ತಂದಿದ್ದೀರಿ ಅಂತ ಹೇಳಿ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಉಡಾನ್ ಯೋಜನೆ ಅಡಿ ಪ್ರತಿ ಜಿಲ್ಲೆಗೂ ವಾಯು ಸಾರಿಗೆ ಸಂಪರ್ಕ ಕೊಡುತ್ತೇವೆ ಎಂದಿದ್ರಿ ಎಲ್ಲಿ ಮಾಡಿದ್ದೀರಿ..?  ಮೈಸೂರು- ಕುಶಾಲನಗರ ಹೈವೇ ಕಾಮಗಾರಿ ಎಲ್ಲೋಯ್ತು.? ನಾಗನಹಳ್ಳಿ ರೈಲ್ವೆ ಸ್ಟೇಷನ್ ಅಭಿವೃದ್ಧಿ ಮಾಡುತ್ತೇವೆ ಅಂದಿದ್ರಿ ಅದು ಇನ್ನೂ ಹಾಗೇ ನಿಂತಿದೆ. ಸೆಮಿ ಕಂಡಕ್ಟರ್ ಉತ್ಪಾದನೆ ಘಟಕ ಮಾಡುತ್ತೇವೆ ಎಂದಿದ್ರಿ ಅದು ಎಲ್ಲೋಯ್ತು. ನೀವು ರಾಜ್ಯಕ್ಕೆ ಯಾವ ಯೋಜನೆ ತಂದಿದ್ದೀವಿ ಅಂತ ಒಂದು ಪಟ್ಟಿ ಬಿಡುಗಡೆ ಮಾಡಿ. ಸುಮ್ಮನೆ ಸುಳ್ಳು ಹೇಳುತ್ತಿದ್ದೀರಾ.? ಮಡಿಕೇರಿಯಲ್ಲಿ ಪೋಲಿಸರಿಗೆ ಧಮ್ಕಿ ಹಾಕುವ ಕೆಲಸ ಮಾಡಿದ್ದಾರೆ. ಇವರ ಮೇಲೆ ಪೋಲಿಸರು ಸುಮೋಟೋ ಕೇಸ್ ದಾಖಲಿಸಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

5 ವರ್ಷದ ಬಿಜೆಪಿ ಸರ್ಕಾರದಲ್ಲಿ ಪ್ರತಿಯೊಬ್ಬರ ತಲೆ ಮೇಲೆ 1. 40  ಲಕ್ಷ ರೂ. ಸಾಲ ಹೊರಿಸಿದ್ದಾರೆ.

ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯದ ಆರ್ಥಿಕ ಪರಿಸ್ಥಿತಿ ಅದೋಗತಿಗೆ ಹೋಗಿದೆ. ಸರ್ಕಾರ  ಶ್ವೇತ ಪತ್ರ ಹೊರಡಿಸಬೇಕು ಎನ್ನುತ್ತಾರೆ. ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಸಿಎಂ ಆಗಿದ್ದಾಗ 75 ಸಾವಿರ ಕೋಟಿ ಸಾಲ ಮಾಡಿದ್ದರು. 2018 ರಿಂದ 2023 ಮಾರ್ಜ್ ವರಗೆ ಮಾಡಿದ ಸಾಲ 2.18 ಲಕ್ಷ ಕೋಟಿ. 5 ವರ್ಷದ ಬಿಜೆಪಿ ಸರ್ಕಾರದಲ್ಲಿ ಪ್ರತಿಯೊಬ್ಬರ ತಲೆ ಮೇಲೆ 1ಲಕ್ಷದ 40 ಸಾವಿರ ಸಾಲ ಹೊರಿಸಿದ್ದಾರೆ. ಪ್ರಧಾನಿ ಮೋದಿ ಪ್ರಚಾರಕ್ಕಾಗಿ  ರಾಜ್ಯಕ್ಕೆ ಬರಲು 46 ಕೋಟಿ ಹಣ ರಾಜ್ಯ ಸರ್ಕಾರದ ಹಣ ಖರ್ಚು ಮಾಡಿದ್ದಾರೆ. 2023 ಸಾಲಿನಲ್ಲಿ ಪಂಚಾಯತ್ ರಾಜ್ ಇಲಾಖೆ, ಪಿ.ಡಬ್ಲ್ಯೂ. ಡಿ ಇಲಾಖೆ ಟೆಂಡರ್ ನಲ್ಲಿ ಲಕ್ಷಾಂತರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ಇದು ಬಿಜೆಪಿ ಅವಧಿಯ ಶ್ವೇತ ಪತ್ರ ಎಂದು ಎಂ.ಲಕ್ಷ್ಮಣ್ ತಿರುಗೇಟು ನೀಡಿದರು.

ಸಿಎಂ ಸಿದ್ದರಾಮಯ್ಯ ಅವರು 6 ತಿಂಗಳ ಅವಧಿಯ ಶ್ವೇತ ಪತ್ರ ಕೊಡ್ತಾರೆ. ನೀವು ಕಳೆದ ಸರ್ಕಾರದ ಅವಧಿಯ ಶ್ವೇತ ಪತ್ರ ಹೊರಡಿಸಿ. ಸಿದ್ದರಾಮಯ್ಯ ಅವರನ್ನು ಹಣಕಾಸು ವಿಚಾರದಲ್ಲಿ ಎದುರಿಸಲು ನಿಮ್ಮಿಂದ ಆಗಲ್ಲ. ಅಂಕಿ ಅಂಶಗಳು ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿ. ಮಾತನಾಡುವಾಗ ನಾಲಿಗೆ ಮೇಲೆ ನಿಗಾ ಇಟ್ಟು ಮಾತನಾಡಿ ಎಂದು  ಆರ್ ಅಶೋಕ್ ವಿರುದ್ದ ಎಂ.ಲಕ್ಷ್ಮಣ್ ಗುಡುಗಿದರು.

Key words: MP Pratap Simha -name –change-KPCC spokesperson- M. Laxman.