ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್’ಗೆ ಸಂಸದ ಪ್ರತಾಪ್ ಸಿಂಹ ಟಾಂಗ್

ಮೈಸೂರು, ಜೂನ್ 21, 2023 (www.justkannada.in): ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್​ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಪ್ರದೀಪ್ ಈಶ್ವರ್ ಬಹಿರಂಗ ಚರ್ಚೆಗೆ ಆಹ್ವಾನಿಸಿದ ಕುರಿತ ಸಂಸದ ಪ್ರತಾಪ್ ಸಿಂಹ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಮೊದಲ ಬಾರಿ ಗೆದ್ದ ಶಾಸಕರು ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು, ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಲು ಹೇಳಿ ಎಂದು ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ವಿಚಾರವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು.

ಸಿಎಂ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಆದಷ್ಟು ಬೇಗ ಮೊದಲ ಬಾರಿಗೆ ಗೆದ್ದ ಶಾಸಕರಿಗೆ, ಹಿರಿಯ ಶಾಸಕರು ಓರಿಯಂಟೇಶನ್ ಕಾರ್ಯಕ್ರಮ ನೀಡುವ ಅಗತ್ಯವಿದೆ ಎಂದು ವ್ಯಂಗ್ಯವಾಡಿದರು.