ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರನ್ನ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್.

ನವದೆಹಲಿ,ಫೆಬ್ರವರಿ,8,2024(www.justkannada.in): ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿಯಾಗಿ ಚರ್ಚಿಸಿದ್ದು ಬಾರಿ ಕುತೂಹಲ ಮೂಡಿಸಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ –ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನ ಉಳಿಸಿಕೊಳ್ಳಲು ಜೆಡಿಎಸ್ ಯತ್ನಿಸುತ್ತಿದೆ. ಇತ್ತ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ ಅಂಬರೀಶ್ ಇದೀಗ ಮಂಡ್ಯ ಕ್ಷೇತ್ರವನ್ನ ಬಿಜೆಪಿ ಉಳಿಸಿಕೊಳ್ಳುವಂತೆ ಜೆ.ಪಿ ನಡ್ಡಾ ಅವರ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇಂದು ಬಿಜೆಪಿ ವರಿಷ್ಠರನ್ನ ಭೇಟಿಯಾಗಿ ಸುಮಲತಾ ಅಂಬರೀಶ್ ಚರ್ಚೆ ನಡೆಸಿದ್ದಾರೆ. ಅಲ್ಲದೆ ಟಿಕೆಟ್ ಅನ್ನು ತಮಗೆ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ  ಬಿಎಲ್ ಸಂತೋಷ್ ಅವರನ್ನೂ ಸಹ ಸುಮಲತಾ ಅಂಬರೀಶ್ ಭೇಟಿಯಾಗಿದ್ದಾರೆ.

Key words: MP- Sumalatha Ambarish- met-BJP President -JP Nadda