Tuesday, September 8, 2026

BDA Apartments

Home Front Page ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸೋದು ಖಚಿತ-ಸಂಸದೆ ಸುಮಲತಾ ಅಂಬರೀಶ್.

ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸೋದು ಖಚಿತ-ಸಂಸದೆ ಸುಮಲತಾ ಅಂಬರೀಶ್.

ಮಂಡ್ಯ,ಫೆಬ್ರವರಿ,23,2024(www.justkannada.in): ಈ ಬಾರಿ ಲೋಕಸಭೆಗೆ ಸ್ಪರ್ಧಿಸೋದು ಖಚಿತ. ನನಗೆ ಮಂಡ್ಯ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆ ಇದೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಹೆಚ್.ಡಿ.ಕುಮಾರಸ್ವಾಮಿ ಏನು ಬೇಕಾದರೂ ಹೇಳಿಕೊಳ್ಳಲಿ. ಅಂತೆ ಕಂತೆಗಳನ್ನ ನಾವು ಕೇಳಿಕೊಂಡೇ ಬರುತ್ತಿದ್ದೇವೆ. ನನಗೆ ಬೇರೆಡೆ ಟಿಕೆಟ್ ಪಡೆಯುವುದು ನನಗೆ ಕಷ್ಟವಲ್ಲ. ಅಂತಿಮ ನಿರ್ಧಾರವಾಗುವುವರೆಗೂ ಏನು ಹೇಳುವುದಕ್ಕೆ ಆಗಲ್ಲ  ಅಂತಿಮವಾಗುವವರೆಗೆ ಏನೂ ಹೇಳುವುದಕ್ಕೆ ಆಗಲ್ಲ ಎಂದರು.

ನನ್ನ ಮುಂದೆ ಹಲವಾರು ಆಯ್ಕೆಗಳಿವೆ. ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ. ನಾನು ಕ್ಷೇತ್ರ ಉಳಿಸಿಕೊಳ್ಳಬೇಕು ಅಂತಾ ಹೇಳಿದ್ದೇನೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು.

Key words: MP Sumalatha Ambarish – sure – contest – LokSabha -election