ಖಾಲಿ ಟ್ರಂಕ್ ಹಿಡಿದು  ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ.

ಬೆಂಗಳೂರು,ಫೆಬ್ರವರಿ,9,2026 (www.justkannada.in):  ನಮ್ಮ ಮೆಟ್ರೊ ಪ್ರಯಾಣ ದರ  ಶೇ 5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ನ್ಯಾಷನಲ್ ಕಾಲೇಜು ಮೆಟ್ರೊ ಬಳಿ  ಸಂಸದ ತೇಜಸ್ವಿ ಸೂರ್ಯ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದು  ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ಅಧಿಕಾರಿಗಳು ಸೂರ್ಯ ಅವರನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.

ಇಂದಿನಿಂದ ನಮ್ಮ ಮೆಟ್ರೊ ಪ‍್ರಯಾಣ ದರ ಶೇ 5 ರಷ್ಟು ಹೆಚ್ಚಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ತಾತ್ಕಾಲಿಕ ತಡೆ ಬಿದ್ದಿದೆ.

Key words: MP, Tejasvi Surya, protests , empty, trunk