ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್.

ಗುಂಡ್ಲುಪೇಟೆ,ಏಪ್ರಿಲ್,12,2023(www.justkannada.in):  ಬಿಜೆಪಿಯಲ್ಲಿ  ಅಭ್ಯರ್ಥಿಗಳ ಘೋಷಣೆ ಬಳಿಕ ಹಲವು ಮುಖಂಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇದೀಗ  ಚಾಮರಾಜನಗರ ಸಂಸದ  ವಿ.ಶ್ರೀ ನಿವಾಸ್ ಪ್ರಸಾದ್  ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಗುಂಡ್ಲುಪೇಟೆ ಸಿ.ಎಮ್.ಎಸ್.ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಣೆ ಮಾಡಿದ್ದಾರೆ.  ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಚುನಾವಣೆ ಪ್ರಚಾರ ವೇಳೆಯಲ್ಲಿ ಈ  ಘೋಷಣೆ ಮಾಡಿದ್ದಾರೆ. 2025ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು  ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ವೇಳೆಯೇ ರಾಜಕೀಯ ನಿವೃತ್ತಿ ಘೋಷಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ನಂತರ ಪಕ್ಷದ ಒತ್ತಾಯದ ಮೇರೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

Key words: MP-V. Srinivas Prasad – announced -his retirement -electoral politics.