ಬಹು ನಿರೀಕ್ಷಿತ ‘ಪುಷ್ಪ 2’ ರಿಲೀಸ್ ಡೇಟ್ ಫಿಕ್ಸ್ !

ಬೆಂಗಳೂರು, ಸೆಪ್ಟೆಂಬರ್ 12, 2023 (www.justkannada.in): ಬಹು ನಿರೀಕ್ಷಿತ ಪ್ಯಾನ್ ಇಂಡಿಯನ್ ಸಿನಿಮಾ ‘ಪುಷ್ಪ 2 ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಬಹು ‘ಪುಷ್ಪ 2: ದಿ ರೂಲ್’  ಸಿನಿಮಾ ಮುಂದಿನ ವರ್ಷ ಆಗಸ್ಟ್ 15ರಂದು ತೆರೆ ಕಾಣಲಿದೆ ಎಂದು ಮಾಹಿತಿ ಹೊರ ಬಿದ್ದಿದೆ.

ವಿಶ್ವದಾದ್ಯಂತ 2024ರ ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್​ ಆಗಲಿದೆ ಎಂಬ ಪೋಸ್ಟರ್ ಮೂಲಕ  ಚಿತ್ರತಂಡವು ಸಿನಿಮಾದ ರಿಲೀಸ್​ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಅಂದಹಾಗೆ ‘ಪುಷ್ಪ’ ಪಾರ್ಟ್ 1 ಸಿನಿಮಾ 350 ಕೋಟಿ ರೂ. ಗಳಿಸಿತ್ತು.