ಬೆಂಗಳೂರು,ಜುಲೈ,10,2025 (www.justkannada.in): ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಹೈಕೋರ್ಟ್ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು. ಈ ಮಧ್ಯೆ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಹಾಗೆಯೇ ವಿಚಾರಣೆಯನ್ನ ಸೆಪ್ಟಂಬರ್ 4ಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿಕೆ ಮಾಡಿದೆ.
Key words: Muda case, High Court, notice, CM Siddaramaiah, wife