Saturday, September 26, 2026

BDA Apartments

ಮುಡಾ ಕೇಸ್: ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಅಂತ್ಯ BDA JK_Adv BDA Adv
Home Front Page ಮುಡಾ ಕೇಸ್: ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಅಂತ್ಯ

ಮುಡಾ ಕೇಸ್: ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಅಂತ್ಯ

ಮೈಸೂರು,ನವೆಂಬರ್,6,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಅಂತ್ಯವಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು . ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.

ಇದೀಗ ವಿಚಾರಣೆ ಅಂತ್ಯವಾಗಿದ್ದು, ವಿಚಾರಣೆ ಮುಗಿಸಿ ಸಿಎಂ ಸಿದ್ದರಾಮಯ್ಯ ಅತಿಥಿಗೃಹಕ್ಕೆ ತೆರಳಿದ್ದಾರೆ.  ಸಿಎಂ ಜೊತೆ ಕಾನೂನು ಸಲಹೆಗಾರ ಪೊನ್ನಣ್ಣ ಸಹ ತೆರಳಿದ್ದಾರೆ.  ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ನಾಲ್ವರು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರನ್ನ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಅಂದರೆ 2 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ಎದುರಿಸಿದರು.

Key words: Muda case,  CM Siddaramaiah, hearing, Lokayukta