Sunday, August 23, 2026

BDA Apartments

Home Front Page ಮುಡಾ ಕೇಸ್ ಗೂ ಹರಿಯಾಣ ಸೋಲಿಗೂ ಸಂಬಂಧವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಮುಡಾ ಕೇಸ್ ಗೂ ಹರಿಯಾಣ ಸೋಲಿಗೂ ಸಂಬಂಧವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

 

ರಾಯಚೂರು, ಅಕ್ಟೋಬರ್,8,2024 (www.justkannada.in):  ಮುಡಾ ಹಗರಣದ ಎಫೆಕ್ಟ್ ನಿಂದಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಸೋಲಾಗಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಅವರಿಗೆ ತಿರುಗೇಟು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಮುಡಾ ಕೇಸ್ ಗೂ ಹರಿಯಾಣ ಸೋಲಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಹರಿಯಾಣ ಫಲಿತಾಂಶಕ್ಕೂ ಮುಡಾಕೇಸ್ ಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ನ ಯಾರೂ ಕೂಡ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಸಿಎಂ ಸಿದ್ದರಾಮಯ್ಯನವರಿಗೆ ಯಾವುದು ಕೂಡ ಸಂಬಂಧವಿಲ್ಲ. ಮುಡಾ ಹಗರಣ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ನಮ್ಮ ಸರ್ಕಾರ ಗಟ್ಟಿಯಾಗಿರುತ್ತದೆ. ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರವು ಇರುತ್ತೆ. ನಮ್ಮ ಸರ್ಕಾರ ಹಾಗೆ ಇರುತ್ತದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

Key words: Muda case, Haryana, election, defeat, DCM, DK Shivakumar