Wednesday, August 12, 2026

BDA Apartments

Home Front Page ಬಿಜೆಪಿಯವರು ಪಾದಯಾತ್ರೆ ಮಾಡಲಿ: ತಕ್ಕ ಉತ್ತರ ನೀಡುತ್ತೇವೆ- ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿಯವರು ಪಾದಯಾತ್ರೆ ಮಾಡಲಿ: ತಕ್ಕ ಉತ್ತರ ನೀಡುತ್ತೇವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,26,2024 (www.justkannada.in): ಮುಡಾ ಹಗರಣ ಸಂಬಂಧ ಬಿಜೆಪಿಯವರು ಪಾದಯಾತ್ರೆ ಮಾಡಲಿ. ಅದಕ್ಕೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಹಗರಣಗಳ ಸರದಾರರು. ಅವರ ಹಗರಣ ಬಿಚ್ಚಿಡುತ್ತೇವೆ ಅಂತಾ ಪಾದಯಾತ್ರೆ ಮಾಡುತ್ತಿದ್ದಾರೆ. ಸಿಎಂ ಹೆಸರಿಗೆ ಜನಪ್ರಿಯತೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ.  ಬಿಜೆಪಿಯವರು ಎಷ್ಟೇ ಪಾದಯಾತ್ರೆಗಳನ್ನ ಮಾಡಲಿ.  ನಾವು ಬಿಜೆಪಿಯವರ ಪಾದಯಾತ್ರೆಗೆ ಉತ್ತರ ಕೊಡುತ್ತೇವೆ ಬಿಜೆಪಿಯವರು ನಮ್ಮ ಪಾದಯಾತ್ರೆ ಕಾಪಿ ಮಾಡುತ್ತಿದ್ದಾರೆ. ನಾವು ಏನು ಮಾಡಬೇಕು ಮಾಡುತ್ತೇವೆ ಎಂದರು.

ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ. ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್‌ ತಿಳಿಸಿದರು.

Key words: muda scam, BJP, DCM, DK Shivakumar