ಬೆಂಗಳೂರು,ಡಿಸೆಂಬರ್,18,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯ ಸ್ಥಿತಿಗತಿ ಬಗ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದರು.
ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಕೆ ಮಾಡಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ಲೋಕಾಯುಕ್ತ ಎಸ್ ಪಿಪಿ ಕೋರ್ಟ್ ಗೆ ಮಾಹಿತಿ ನೀಡಿದರು. ಈ ವೇಳೆ ದೂರುದಾರ ಸ್ನೇಹಮಯಿ ಕೃಷ್ಣ, ತನಿಖೆಯನ್ನು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ಮಧ್ಯೆ ಎಸ್ ಪಿಪಿ, ಕೇಸ್ ಡೈರಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವುದಾಗಿ ತಿಳಿಸಿದರು. ನಂತರ ಬಿ ರಿಪೋರ್ಟ್ ಗೆ ಸಂಬಂಧಿಸಿದಂತೆ ಹೆಚ್ಚುವರಿ ವಾದಮಂಡನೆಗಳಿದ್ದರೆ ಸಲ್ಲಿಸಿ ಎಂದು ಇಡಿ, ದೂರುದಾರ ಸ್ನೇಹಮಯಿ ಕೃಷ್ಣಗೆ ನ್ಯಾಯಾಲಯ ಸೂಚನೆ ನೀಡಿತು. ಬಳಿಕ ವಿಚಾರಣೆಯನ್ನು ಡಿಸೆಂಬರ್ 23ರಕ್ಕೆ ಮುಂದೂಡಿಕೆ ಮಾಡಿತು.
Key words: Muda scam, Court, adjourns, hearing, submission, report







