Sunday, August 23, 2026

BDA Apartments

Home Front Page ಮುಡಾ ಹಗರಣ: ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್

ಮುಡಾ ಹಗರಣ: ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್

ಬೆಂಗಳೂರು,ಅಕ್ಟೋಬರ್,3,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಇಡಿ ಅಧಿಕಾರಿಗಳು ಬೆಳಿಗ್ಗೆ ಹೆಬ್ಬಾಳ ನಿವಾಸಕ್ಕೆ ತೆರಳಿ ಸಚಿವ ಭೈರತಿ ಸುರೇಶ್ ಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಈ ವೇಳೆ  ನವರಾತ್ರಿ ಬಳಿಕ ವಿಚಾರಣೆಗೆ ಬರುವುದಾಗಿ ಸಚಿವ ಭೈರತಿ ಸುರೇಶ್ ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ದ ಇಸಿಐಆರ್ ದಾಖಲಿಸಿದೆ. ಇದೀಗ ಸಚಿವ ಭೈರತಿ ಸುರೇಶ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

Key words: Muda scam,  ED notice, Minister, Bhairati Suresh