ವಾಲ್ಮೀಕಿ ನಿಗಮ, ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶಾಸಕ ಜಿ.ಟಿ ದೇವೇಗೌಡ ಆಗ್ರಹ

ಮೈಸೂರು,ಜುಲೈ,11,2024 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶಾಸಕ ಜಿ.ಟಿ ದೇವೇಗೌಡ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ,  ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ವಾಲ್ಮೀಕಿ ಹಗರಣ  ಸಿಎಂ ಗಮನಕ್ಕೆ ಬರದೇ ಹಣ ವರ್ಗಾವಣೆಯಾಗಿಲ್ಲ. ಹೀಗಾಗಿ ರಾಜೀನಾಮೆ ನೀಡಲಿ ಎಂದು  ಒತ್ತಾಯಿಸಿದರು.

ಮುಡಾ ಹಗರಣ ಸಿಬಿಐ ತನಿಖೆಗೆ  ವಹಿಸಲಿ. ಜುಲೈ 15ರಿಂದ ಅಧಿವೇಶನ ಆರಂಭವಾಗಲಿದೆ.  ಮುಡಾ ಹಗರಣದ ವಿರುದ್ದ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟ ಹೇಗಿರುತ್ತೆ ಕಾದು ನೋಡಿ ಎಂದು ಜಿ.ಟಿ ದೇವೇಗೌಡರು ತಿಳಿಸಿದರು.

Key words: Muda scam, GT Deve Gowda, CM Siddaramaiah