Saturday, August 15, 2026

BDA Apartments

Home Front Page ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಿಟ್ಟು ಓದಿ –ಸಿಎಂ ವಿರುದ್ದ ಹೆಚ್.ಡಿಕೆ ಟ್ವೀಟ್

ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಿಟ್ಟು ಓದಿ –ಸಿಎಂ ವಿರುದ್ದ ಹೆಚ್.ಡಿಕೆ ಟ್ವೀಟ್

ಬೆಂಗಳೂರು,ಆಗಸ್ಟ್,23,2024 (ww.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಯೊಂದನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಿಟ್ಟು ಓದಿ ಎಂದು ಟಾಂಗ್ ಕೊಟ್ಟಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ.

ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. “50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!” “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು  ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.”

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿಕೆ  ಕುಟುಕಿದ್ದಾರೆ

ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ.

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? ಎಂದು ಹೆಚ್.ಡಿಕೆ ಲೇವಡಿ ಮಾಡಿದ್ದಾರೆ.

Keu words: muda scam, HD Kumaraswamy, CM, Siddaramaiah