Saturday, August 15, 2026

BDA Apartments

Home Front Page ಎಎಪಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ.

ಎಎಪಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ.

ಬೆಂಗಳೂರು,ಜುಲೈ.4,2022(www.justkannada.in):ಖ್ಯಾತ ನಟ ಹಾಗೂ ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರ ನಿರ್ದೇಶನದಂತೆ ಚಂದ್ರುರವರನ್ನು ನೇಮಕ ಮಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ರವರು ,ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರುರವರು ಮಹತ್ವದ ಪಾತ್ರ ವಹಿಸವ ದೃಢ ವಿಶ್ವಾಸವಿದೆ” ಎಂದು ಹೇಳಿದರು.

ನೂತನ ಜವಾಬ್ದಾರಿ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ದೆಹಲಿ ಹಾಗೂ ಪಂಜಾಬ್‌ ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ, ಇಲ್ಲಿ ಕೂಡ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿಯು ಶ್ರಮಿಸಲಿದೆ. ನನ್ನ ಮೇಲೆ ವಿಶ್ವಾಸವನ್ನಿಟ್ಟು ಸಮಿತಿಯ ಅಧ್ಯಕ್ಷ ಜವಾಬ್ದಾರಿ ನೀಡಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು” ಎಂದು ಹೇಳಿದರು.

ಗೌರಿಬಿದನೂರು ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರುರವರು ಜೂನ್‌ನಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದರು. ಬೆಂಗಳೂರಿನ ಪರಾಗ್‌ ಹೋಟೆಲ್‌ ನಲ್ಲಿ ನಡೆದ ಸಮಾರಂಭದಲ್ಲಿ ಚಂದ್ರುರವನ್ನು ಪಕ್ಷದ ಮುಖಂಡರು ಬರಮಾಡಿಕೊಂಡಿದ್ದರು.

Key words: mukyamantri Chandru –appointed- AAP –Public-Relations – Promotion- Committee -Chairman.