ಇಂದು ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವಿಗಾಗಿ ಹೋರಾಟ

ಬೆಂಗಳೂರು, ಸೆಪ್ಟೆಂಬರ್ 23, 2021 (www.justkannada.in): ಇಂದು ಮುಂಬೈ ಇಂಡಿಯನ್ಸ್ ಕೋಲ್ಕೊತ್ತಾ ನೈಟ್ ರೈಡರ್ಸ್ ಗೆಲುವಿಗಾಗಿ ಹೋರಾಟ ನಡೆಸಲಿವೆ.

ಕೋಲ್ಕತ್ತಾ ನೈಟ್​ ರೈಡರ್ಸ್​ ಮತ್ತೆ ಗೆಲುವಿನ ಲಯಕ್ಕೆ ಮರಳಿದ್ದು, ಇದೇ ಹುಮ್ಮಸ್ಸಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೋರಾಟಕ್ಕೆ ಸಿದ್ಧವಾಗಿದೆ.

ಚೆನ್ನೈ ವಿರುದ್ಧ ಮೊದಲ ಪಂದ್ಯದಲ್ಲಿ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದರು. ಈ ಪಂದ್ಯವನ್ನು ಮುಂಬೈ ಸೋತಿತ್ತು. ಹೀಗಾಗಿ ಪಂದ್ಯಕ್ಕೆ ರೋಹಿತ್ ಪುನರಾಗಮನದೊಂದಿಗೆ ತಂಡ ಹೊಸ ಉತ್ಸಾಹದಿಂದ ಕಣಕ್ಕಿಳಿಯಲಿದೆ.

ಕೆಕೆಆರ್ ತಂಡದ ಶುಬ್ನಂ ಗಿಲ್ ಫುಲ್ ಫಾರ್ಮ್ ನಲ್ಲಿದ್ದಾರೆ. ಪ್ರಸಿದ್ಧ ಕೃಷ್ಣ, ವರುಣ್ ಚಕ್ರವರ್ತಿಯನ್ನೊಳಗೊಂಡ ಬೌಲಿಂಗ್ ಪಡೆಯೂ ಬ್ಯಾಟ್ಸ್ ಮನ್ ಗಳನ್ನು ಕಟ್ಟಿ ಹಾಕಲು ಸಶಕ್ತವಾಗಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ.