ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್

ಮುಂಬೈ, ಜನವರಿ 08, 2019 (www.justkannada.in): ಇಂಡಿಯನ್ ಪ್ರಿಮಿಯರ್ ಲೀಗ್ 2020 ರ ಆವೃತ್ತಿಗೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 29 ರಿಂದ ಮೇ. 24 ಕ್ಕೆ ಮುಗಿಯಲಿವೆ.

ಮೊದಲ ಪಂದ್ಯವು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಾರ್ಚ್ 29 ರಂದು ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ. ಮೊದಲ ಕೆಲ ಪಂದ್ಯಗಳಿಗೆ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನ ಆಟಗಾರರು ಅಲಭ್ಯರಾಗಲಿದ್ದಾರೆ.

ಮಾರ್ಚ್ 31 ರಿಂದ ಐಪಿಎಲ್ ನಲ್ಲಿ ಭಾಗವಹಿಸಲಿದ್ದಾರೆ. ಇನ್ನು ಈ ಬಾರಿಯ ಐಪಿಎಲ್ ಫೈನಲ್ ಪಂದ್ಯವು ಗುಜರಾತ್ ನ ಮೊಟೇರಾದಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.1.10 ಲಕ್ಷ ಅಭಿಮಾನಿಗಳು ಕುಳಿತುಕೊಳ್ಳಲು ನೆರವಾಗುವ ಜೊತೆಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮೈದಾನ ನಿರ್ಮಿಸಲಾಗಿದೆ.