ಮುಂಬೈ-ಪಂಜಾಬ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

ಬೆಂಗಳೂರು, ಸೆಪ್ಟೆಂಬರ್ 28, 2021 (www.justkannada.in): ಮುಂಬೈ-ಪಂಜಾಬ್​ಗೆ ಮಾಡು ಇಲ್ಲವೇ ಮಡಿ ಪಂದ್ಯ ಇಂದು ಅಬುಧಾಬಿಯಲ್ಲಿ ನಡೆಯಲಿದ್ದು, ಹೈವೋಲ್ಟೇಜ್ ಮ್ಯಾಚ್ ವೀಕ್ಷಿಸಲು ಅಭಿಮಾನಿಗಳು ಕೂಡ ಕಾತರರಾಗಿದ್ದಾರೆ.

ಅಬುದಾಭಿಯಲ್ಲಿ ಇಂದು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಕೆ. ಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ.

ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟು ಕಳಪೆ ಪ್ರದರ್ಶನ ತೋರುತ್ತಿರುವ ಹಾಲಿ ಚಾಂಪಿಯನ್ನರಿಗೆ ಇಂದಿನ ಪಂದ್ಯ ಬಹುಮುಖ್ಯವಾಗಿದೆ.

ಪಂಜಾಬ್ ಕಿಂಗ್ಸ್ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಕೇವಲ 4 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಹೀಗಾಗಿ ಎರಡೂ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.

key words: Mumbai-Punjab do or die match today