ಬೆಂಗಳೂರು, ನವೆಂಬರ್,6,2026 (www.justkannada.in): ವ್ಯಕ್ತಿಯೊಬ್ಬರ ತನ್ನ ಪತ್ನಿ ಸೇರಿ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಂದುಶೇಖರ್ 7 ಮಂದಿಯನ್ನು ಕೊಲೆ ಮಾಡಿರುವ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಂದುಶೇಖರ್ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮಪುರದ ರೂಪವತಿ, ಆಕೆಯ ಮಗಳು ಸುನೀತಾ, ಪುತ್ರರಾದ ಶಿವಕುಮಾರ್ ಮತ್ತು ಶಂಕರ್, ಸೊಸೆಯರಾದ ದಿವ್ಯಾ ಮತ್ತು ನಳಿನಿ ಹಾಗೂ ಏಳು ವರ್ಷದ ಮೊಮ್ಮಗ ಪುನೀತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಂದಿದ್ದಾನೆ . ಬಳಿಕ ಮೃತದೇಹಗಳನ್ನು ಬೇರೆ ಬೇರೆ ಸ್ಥಳಗಳಲ್ಲಿ ಎಸೆದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. 
ಸುಮಾರು 20 ವರ್ಷಗಳ ಹಿಂದೆ ಸುನೀತಾಳನ್ನು ವಿವಾಹವಾಗಿದ್ದ ಇಂದುಶೇಖರ್, ಪತ್ನಿ ತನ್ನ ತವರು ಮನೆಯವರೊಂದಿಗಿನ ಸಂಬಂಧವನ್ನು ಮುಂದುವರಿಸಿದ್ದಕ್ಕೆ ಅಸಮಾಧಾನ ಹೊಂದಿದ್ದ ಎನ್ನಲಾಗಿದೆ . ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಪತ್ನಿಯ ತಾಯಿ ಮತ್ತು ಸಹೋದರರು ಆಕೆಯ ಪರವಾಗಿ ನಿಲ್ಲುತ್ತಿದ್ದುದೂ ಆರೋಪಿಗೆ ಸಹಿಸಲಾಗುತ್ತಿರಲಿಲ್ಲ ಎನ್ನಲಾಗಿದೆ.
ಪ್ರಕರಣದ ಗಂಭೀರತೆ ಪರಿಗಣಿಸಿ ಡಿಸಿಪಿ ನೇತೃತ್ವದಲ್ಲಿ ಮೂವರು ಎಸಿಪಿಗಳ ವಿಶೇಷ ತಂಡವನ್ನು ರಚಿಸಲಾಗಿದ್ದು ನಂದಿಬೆಟ್ಟದ ಸುತ್ತಮುತ್ತ ಎಸೆಯಲಾದ ಮೃತದೇಹಗಳ ಪತ್ತೆಗೆ ಹಾಗೂ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
Murder, 7 members, single family, Accused, arrested






