ಹೈಕೋರ್ಟ್ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ.

ಬೆಂಗಳೂರು,ಜುಲೈ,24,2023(www.justkannada.in):  ರಾಜ್ಯ ಹೈಕೋರ್ಟ್​ನ  6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನ್ಯಾಯಮೂರ್ತಿಗಳಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಸಂದೇಶ ರವಾನಿಸಿದ್ದು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ .  ಇದನ್ನು ದುಬೈ ಗ್ಯಾಂಗ್​ನಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹೈಕೋರ್ಟ್​ನ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ. ಮುರಳೀಧರ್​ಗೆ ಸಂದೇಶ ಬಂದಿದೆ.

50 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದ್ದು, ಅಲೈಡ್​​ ಬ್ಯಾಂಕ್ ಲಿಮಿಟೆಡ್​ನ‌ ಖಾತೆಯ ಸಂಖ್ಯೆಯನ್ನು ದುಷ್ಕರ್ಮಿಗಳು ನೀಡಿದ್ದಾರೆ.  ಬೆದರಿಕೆ ಸಂಬಂಧ ಸೆಂಟ್ರಲ್ ಕ್ರೈಮ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ವಾಟ್ಸಪ್ ಸಂದೇಶದ ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ.

Key words: murder- threat – 6 judges –karnataka- High Court.