Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Crime ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಬರ್ಬರ ಹತ್ಯೆ

ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಬರ್ಬರ ಹತ್ಯೆ

ಮೈಸೂರು,ಸೆಪ್ಟೆಂಬರ್,21,2020(www.justkannada.in) : ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ( 67) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.jk-logo-justkannada-logo

ನಿವೇದಿತ ನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಮನೆಗೆ ನುಗ್ಗಿ ಮನಸೋ ಇಚ್ವೆ ಇರಿದು ಬರ್ಬರವಾಗಿ ಹಂತಕರು ಕೊಲೆ ಮಾಡಿದ್ದಾರೆ.

ಪರಶಿವಮೂರ್ತಿ ಹಾಸನ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿಯಾಗಿದ್ದರು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಲೇವಾದೇವಿ , ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

murderretiredprincipalbarbaramysore

ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡಸಲಾಗುತ್ತಿದೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : Murder-retired-principal-Barbara-Mysore