ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ.

ಚಿತ್ರದುರ್ಗ,ಸೆಪ್ಟಂಬರ್,14,2022(www.justkannada.in) ಅಪ್ರಾಪ್ತ ಬಾಲಕೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ  ಸೆಪ್ಟಂಬರ್ 16ಕ್ಕೆ ಕೋರ್ಟ್ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಗಿದಿತ್ತು. ಮತ್ತೆ ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು.

ಈ ನಡುವೆ ಇದೀಗ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೆಪ್ಟಂಬರ್ 16ಕ್ಕೆ ಮುಂದೂಡಿದೆ. ಸ್ವಾಮೀಜಿ ಜಾಮೀನು ಅರ್ಜಿಗೆ ಅಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಕೋರ್ಟ್  ಸೂಚನೆ  ನೀಡಿದೆ.

Key words: Muruga shri- bail application-hearing -adjourned – September 16.