ಮುರುಘಾ ಶ್ರೀಗೆ ಬಿಗ್ ರಿಲೀಫ್: ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆ

ಚಿತ್ರದುರ್ಗ,ನವೆಂಬರ್,26,2025 (www.justkannada.in):  ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆಗೊಳಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ತೀರ್ಪು ನೀಡಿದೆ.

ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ ಪ್ರಕರಣದ ಇತರೆ ಆರೋಪಿಗಳಾದ ರಶ್ಮಿ ಮತ್ತು  ಪರಮಶಿವಯ್ಯರನ್ನೂ ಖುಲಾಸೆಗೊಳಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.

ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ ​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್ ​ನ ವಿಚಾರಣೆ ನಡೆದಿತ್ತು.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

Key words: Muruga Shri,  Acquittal, first , POCSO case