ಮುರುಘಶ್ರೀಗಳ ಬಂಧನ ವಿಚಾರ:  ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ-ಸಿಎಂ ಬಸವರಾಜ ಬೊಮ್ಮಾಯಿ.

ಮಂಗಳೂರು,ಸೆಪ್ಟಂಬರ್,2,2022(www.justkannada.in):  ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ  ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳೂರು ಏರ್ ಪೋರ್ಟ್ ನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕರಣದ ಬಗ್ಗೆ ನಾವು ಮಾತನಾಡುವುದಿಲ್ಲ. ಪ್ರಕರಣ ತನಿಖೆ ನಡೆಸಲು ಪೊಲೀಸರಿಗೆ  ಮುಕ್ತ ಅವಕಾಶ ನೀಡಿದ್ದೇವೆ.  ಎಲ್ಲವೂ ಕಾನೂನು ಪ್ರಕಾರ ನಡೆಯಲಿದೆ. ಈ ಸಂದರ್ಭದಲ್ಲಿ ಮಾತನಾಡುವುದು ಸರಿಯಲ್ಲ ಎಂದರು.

ಅಪ್ರಾಪ್ತ ವಯಸ್ಸಿನ ಇಬ್ಬರು ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಅವರನ್ನು ಪೋಕ್ಸೋ ಕಾಯ್ದೆಯಡಿ  ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎಫ್​ಐಆರ್ ದಾಖಲಾದ 6 ದಿನಗಳ ಬಳಿಕ ಮುರುಘಾ ಶ್ರೀಗಳ ಬಂಧನವಾಗಿದೆ.

Key words: Murugashri arrest- investigation- CM -Basavaraja Bommai.