Sunday, September 20, 2026

BDA Apartments

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದಿದ್ದೇಕೆ ಹಂಸಲೇಖ?! BDA JK_Adv BDA Adv
Home Cinema ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದಿದ್ದೇಕೆ ಹಂಸಲೇಖ?!

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದಿದ್ದೇಕೆ ಹಂಸಲೇಖ?!

ಬೆಂಗಳೂರು, ಡಿಸೆಂಬರ್ 27, 2021 (www.justkannada.in): ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರ್ಯಗಳನ್ನು ಮನಸಾರೆ ಹೊಗಳಿದ್ದಾರೆ ಸಂಗೀತ ನಿರ್ದೇಶಕ ಹಂಸಲೇಖ.

ಸಿದ್ಧರಾಮಯ್ಯ ನೀಡಿದ ಕೊಡುಗೆಗಳ ಬಗ್ಗೆ ವೇದಿಕೆ ಮೇಲೆ ಮಾತಾಡಿದ್ದಾರೆ. ಮತ್ತೆ ರಾಜ್ಯಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅಂತ ಹಂಸಲೇಖ ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಮಕ್ಕಳಿಗೆ ಹಾಲು ನೀಡಿದ ಮುಖ್ಯಮಂತ್ರಿ ಅಂದರೆ ಸಿದ್ದರಾಮಯ್ಯ. ಹಾಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಈ ರಾಜ್ಯ ಸಿಎಂ ಆಗಲಿ ಎಂದು ಹಂಸಲೇಖ ಹೇಳಿದ್ದಾರೆ.

ಸಿದ್ದರಾಮಯ್ಯ ನೀಡಿದ ಅನ್ನಭಾಗ್ಯ ಯೋಜನೆ, ದೇಶಿ ಶಾಲೆಗಳಿಗೂ ನೆರವು ನೀಡಿದ ಬಗ್ಗೆ ಹಂಸಲೇಖ ವೇದಿಕೆ ಮೇಲೆ ಮಾತಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಶರಣರ ಪರಂಪರೆ ಬಗ್ಗೆ ಅರಿವಿದೆ. ಹೀಗಾಗಿ “ಈ ಧರ್ಮೋಕ್ರಸಿಯನ್ನು ಪಕ್ಕಕ್ಕೆ ಸರಿಸಿ, ಡೆಮೊಕ್ರಸಿಯನ್ನು ತಂದುಕೊಡಲಿ ಎಂದಿದ್ದಾರೆ.