ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ನಿಧನ

ಬೆಂಗಳೂರು, ಮೇ 15, 2020 (www.justkannada.in): ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ನಿಧನರಾಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ‌ ಮುತ್ತಪ್ಪ ರೈ (68) ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾತ್ತು.

ಹೀಗಾಗಿ ಏ.30ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಜೀವನ್ಮರಣದ ಹೊರಾಟ ನೆಡೆಸುತ್ತಿದ್ದ ರೈ ಬೆಳಗ್ಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ.