ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನ: ಅತ್ಯುತ್ತಮ ‘RRR’ ನಗರವಾಗಿ ಬಿಬಿಎಂಪಿ ಆಯ್ಕೆ.

ಬೆಂಗಳೂರು,ಜುಲೈ,27,2023(www.justkannada.in): ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ಏರ್ಪಡಿಸಿದ್ದ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿ, ಕರ್ನಾಟಕದ “ಅತ್ಯುತ್ತಮ ಆರ್.ಆರ್.ಆರ್ (Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ಘೋಷ ವಾಕ್ಯದಡಿ ಮೇ 15 ರಿಂದ ಪರಿಸರ ದಿನವಾದ ಜೂನ್ 5 ರವರೆಗೆ ಈ ರಾಷ್ಟ್ರೀಯ ಅಭಿಯಾನವನ್ನು‌ ನಡೆಸಿತ್ತು.

ಅದರ ಭಾಗವಾಗಿ ಪೌರಾಡಳಿತ ನಿರ್ದೇಶನಾಲಯವು ಕರ್ನಾಟಕ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ಧ್ಯೇಯದೊಂದಿಗೆ Reduce, Reuse and Recycle-RRR ಕೇಂದ್ರಗಳನ್ನು ಸ್ಥಾಪಿಸಲು ತಿಳಿಸಿತ್ತು.

ಅದರಂತೆ ಬಿಬಿಎಂಪಿ ವ್ಯಾಪ್ತಿಯ 49 ವಾರ್ಡ್ ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಾರ್ವಜನಿಕರಿಂದ ಸಂಗ್ರಹಿಸಿತ್ತು.

ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ವಿಭಿನ್ನ ಆಯ್ಕೆ ಮಾನದಂಡಗಳ ಆಧಾರದ ಮೇಲೆ ರಾಜ್ಯವು ಬೆಂಗಳೂರು ನಗರವನ್ನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆರ್.ಆರ್.ಆರ್ ನಗರಗಳಲ್ಲಿ ಒಂದಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಘನ ತ್ಯಾಜ್ಯ ವಿಭಾಗದ ಅಧಿಕಾರಿ/ಸಿಬ್ಬಂದಿಗಳನ್ನು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಅಭಿನಂದಿಸಿದ್ದಾರೆ.

Key words: My life, my clean city –campaign-BBMP -selected – best -‘RRR’ city.