Thursday, July 30, 2026

BDA Apartments

Home Front Page ನನ್ನ ಯೋಜನೆಗಳು ಶಾಶ್ವತ: ಅವುಗಳನ್ನ ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ-ಟೀಕಾಕಾರರಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ…

ನನ್ನ ಯೋಜನೆಗಳು ಶಾಶ್ವತ: ಅವುಗಳನ್ನ ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ-ಟೀಕಾಕಾರರಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ…

ಬೆಂಗಳೂರು,ಮೇ,14,2019(www.justkannada.in): ತಮ್ಮ  ಬೆಂಬಲಿಗರ ಬಗ್ಗೆ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಟ್ವಿಟ್ಟರ್ ನಲ್ಲಿ ಗುಟುರು ಹಾಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೆ ಟ್ವಟ್ಟರ್ ನಲ್ಲಿ  ತಮ್ಮ ಟೀಕಾಕಾರರಿಗೆ ಕುಟುಕಿದ್ದಾರೆ.

ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ….ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಟ್ವಿಟ್ ಮಾಡಿ ತಮ್ಮ ವಿರುದ್ದ ಮಾತನಾಡವವರಿಗೆ ಚಾಟಿ ಬೀಸಿದ್ದಾರೆ.

ಮೈತ್ರಿಕೂಟದಲ್ಲಿ ಇಂತಹದನ್ನ ಮಾಡಬಾರದು- ಸಚಿವ ಜಿ.ಟಿಡಿ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಉತ್ತರ…

ಇನ್ನೊಂದು ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು  ಸಚಿವ ಜಿ.ಟಿ ದೇವೇಗೌಡರಿಗೆ ಸಲಹೆ ನೀಡಿದ್ದಾರೆ.

Key words: My plans –not- temporary-any government – stop- Siddaramaiah