ಮೈಸೂರು: ಆಯುಷ್ ಡಿಜಿಟಲ್ ವಸ್ತುಪ್ರದರ್ಶನ ಅವಧಿ ವಿಸ್ತರಣೆ.

ಮೈಸೂರು,ಜೂನ್,23,2022(www.justkannada.in): ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ನಡೆಯುತ್ತಿರುವ ಆಯುಷ್ ವಸ್ತುಪ್ರದರ್ಶನ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್, ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ವಸ್ತುಪ್ರದರ್ಶನದಲ್ಲಿ ಯೋಗಕ್ಕೆ ಸಂಬಂಧಪಟ್ಟ ಮಾಹಿತಿಯ ಪ್ರಾತ್ಯಕ್ಷಿಕೆ ಒಳಗೊಂಡ ಡಿಜಿಟಲ್ ವಸ್ತುಪ್ರದರ್ಶನಕ್ಕೆ ಸಾರ್ವಜನಿಕರಿಂದ ಹೆಚ್ಚು ಸ್ಪಂದನೆ ಬಂದಿದೆ. ಈ ಹಿನ್ನೆಲೆಯಲ್ಲಿ ಜೂನ್ 26 ಭಾನುವಾರದವರೆಗೆ ಸಾರ್ವಜನಿಕ ವೀಕ್ಷಣೆಗೆ ವಸ್ತುಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಸದರಿ ವಿಷಯವಾಗಿ ಜನರ ಬೇಡಿಕೆಗೆ ಸ್ಪಂದಿಸಿ ಆಯುಸ್ ಡಿಜಿಟಲ್ ವಸ್ತುಪ್ರದರ್ಶನದ ಅವಧಿ ವಿಸ್ತರಣೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇವೆ.

ಅವಧಿ ವಿಸ್ತರಣೆಯಾಗಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಯೋಗ ಅಭಿಮಾನಿಗಳು ಪ್ರತಿನಿತ್ಯ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಜ್ಞಾನಾರ್ಜನೆಗೊಳ್ಳುವುದರೊಂದಿಗೆ ವಸ್ತುಪ್ರದರ್ಶನದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎ ರಾಮದಾಸ್ ಮನವಿ ಮಾಡಿದ್ದಾರೆ.

Key words: Mysore-Aayush -Digital –Exhibition-Period-Extension.