Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಇನ್ನೆರಡು ದಿನ ಮೈಸೂರು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಇನ್ನೆರಡು ದಿನ ಮೈಸೂರು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಮೈಸೂರು, ಡಿಸೆಂಬರ್ 01, 2019 (www.justkannada.in): ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಸಂಜೆಯಿಂದ ತುಂತುರು ಮಳೆಯಾಗುತ್ತಿದೆ. ಅರಬ್ಬೀ ಸಮುದ್ರ ಮತ್ತು ಹಿಂದೂ ಮಹಾಸಾಗರದ ಮಧ್ಯೆ ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಗರದಲ್ಲಿ ಭಾನುವಾರ ಬೆಳಗ್ಗೆಯೇ ತುಂತುರು ಮಳೆ ಆರಂಭವಾಗಿದೆ. ಮಳೆ ಜೋರಾಗಿಯೂ ಬಾರದೇ, ಕಡಿಮೆಯೇ ಆಗದೆ ವೀಕೆಂಡ್ ಮೂಡ್‌ನಲ್ಲಿದ್ದ ಜನರಿಗೆ ನಿರಾಸೆ ಮೂಡಿಸಿದೆ.