ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ ..

ಮೈಸೂರು,ನ,6,2019(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಮೈಸೂರಿನ ಹುಣಸೂರು ಠಾಣಾ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ರುಹೇದ್ (33) ಹಾಗೂ ರಕೀಬ್ (23) ಬಂಧಿತ ಆರೋಪಿಗಳು. ಹುಣಸೂರಿನ ನಿವಾಸಿಗಳಾಗಿದ್ದು, ಹುಣಸೂರು ಪಟ್ಟಣದ ಕ್ರೀಡಾಂಗಣದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಬಂಧಿತ ಇಬ್ಬರು ವೆಲ್ಡಿಂಗ್ ಮತ್ತು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಇನ್ನು ಬಂಧಿತರಿಂದ 110ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-Arrest – two -accused – selling -marijuana