ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಟೋಲ್ ಸಂಗ್ರಹ: ಸಚಿವ ಚಲುವರಾಯಸ್ವಾಮಿ ಕೆಂಡಾಮಂಡಲ.

ಮೈಸೂರು,ಜುಲೈ,1,2023(www.justkannada.in): ಮೈಸೂರು-ಬೆಂಗಳೂರು ಹೆದ್ದಾರಿ ಎರಡನೇ‌ ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲಾಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೆಂಡಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಕೇಂದ್ರ ಸರ್ಕಾರ ಎಲ್ಲಿಂದಲೋ ಹಣ ತಂದಿಲ್ಲ. ರಾಜ್ಯ ಸರ್ಕಾರಗಳು ಕಟ್ಟುವ ತೆರಿಗೆಯಿಂದಲೇ ಅಭಿವೃದ್ಧಿ ಕಾರ್ಯ ಮಾಡುತ್ತೆ. ಹೀಗಿದ್ದರೂ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕಾಮಗಾರಿ ಪೂರ್ಣವಾಗದೆ ಟೋಲ್ ಸಂಗ್ರಹ ಬೇಡ ಅಂತ ಹೇಳಿದ್ದೇವೆ.  ಎಡಿಜಿಪಿ ಅಲೋಕ್​ಕುಮಾರ್ ಸ್ಥಳ ಪರಿಶೀಲನೆ ಮಾಡಿದ್ದಾರೆ.  ಎಲ್ಲ ಸಮಸ್ಯೆ ಸರಿ ಮಾಡಿಕೊಂಡು ಟೋಲ್ ಸಂಗ್ರಹಿಸಿದರೆ ನಮ್ಮ ಅಡ್ಡಿ ಇಲ್ಲ. ಶೀಘ್ರದಲ್ಲೇ ಇದಕ್ಕೊಂದು ರೆಮಿಡಿ ಕಂಡು ಹಿಡಿಯುತ್ತೇವೆ ಎಂದು ಹೇಳಿದರು.

ದಿನ ಬೆಳಗಾದ್ರೆ ಜೆಡಿಎಸ್ ಬಿಜೆಪಿಯವರು ಏನೇನೋ ಮಾತನಾಡಿ ಪ್ರಚಾರ ತೆಗೆದುಕೊಳ್ಳೋಕೆ ನೋಡುತ್ತಾರೆ. ಗ್ಯಾರಂಟಿ ಯೋಜ‌ನೆಗಳು ಜಾರಿ ಆಗೋದೇ ಇಲ್ಲ ಅಂತ ಎರಡೂ ಪಕ್ಷ ಹೋರಾಟ ಮಾಡಿದವು. ದೇಶದ‌ ಇತಿಹಾಸದಲ್ಲೇ ಯಾವುದೇ ಸರ್ಕಾರ ಈ ರೀತಿ ಮಾಡಿದೆಯಾ? ಎಂದು ಚಲುವರಾಯಸ್ವಾಮಿ ಕಿಡಿಕಾರಿದರು.

ಜುಲೈ 5 ರಿಂದ ಯಡಿಯೂರಪ್ಪ ಧರಣಿ ಆರಂಭಿಸುವ ವಿಚಾರ ಸಂಬಂಧ , ಬಿಎಸ್ ವೈಗೆ ಸ್ವಾಗತ ಕೋರಿದ ಸಚಿವ  ಚಲುವರಾಯಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ, ಸಾಮ್ರಾಟ್ ಅಶೋಕ್, ಸಿ ಟಿ ರವಿ ಎಲ್ಲರೂ ಬಂದು ಹೋರಾಟ ಮಾಡಲಿ ಎಂದು ವ್ಯಂಗ್ಯವಾಡಿದರು.

Key words: Mysore-Bangalore- Express Highway- Toll –Collection-Minister -Chaluvarayaswamy