Thursday, September 24, 2026

BDA Apartments

Home Crime ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ: 20 ದ್ವಿಚಕ್ರ ವಾಹನಗಳು ವಶಕ್ಕೆ.

ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ: 20 ದ್ವಿಚಕ್ರ ವಾಹನಗಳು ವಶಕ್ಕೆ.

ಮೈಸೂರು,ಫೆಬ್ರವರಿ,14,2024(www.justkannada.in): ಮೈಸೂರಿನ ನಜರಬಾದ್ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.

ಬಂಧಿತನಿಂದ 9 ಲಕ್ಷ ರೂಪಾಯಿ ಮೌಲ್ಯದ ಒಟ್ಟು 20 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಪೊಲೀಸರು ಗಸ್ತಿನಲ್ಲಿದ್ದಾಗ  ಆರೋಪಿಯು ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ. ಈ ನಡುವೆ ಪೋರಂ ಮಾಲ್ ಬಳಿ ಡಿಯೋ ಬೈಕ್ ನಲ್ಲಿ ಸಾಗುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದಿರುವ ಬಗ್ಗೆ ಆರೋಪಿ ಒಪ್ಪಿಕೊಂಡಿದ್ದಾನೆ.ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ: 20 ದ್ವಿಚಕ್ರ ವಾಹನಗಳು ವಶಕ್ಕೆ arrest arrest 1

ಮೈಸೂರಿನ ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9, ಎನ್ ಆರ್, ಲಷ್ಕರ್, ಕೆ ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದೊಂದು, ಮಂಡ್ಯ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ 4, ಮಂಡ್ಯ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಹಾಗೂ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಒಂದು ದ್ವಿಚಕ್ರ ವಾಹನ ಕದ್ದಿರುವ ಸಂಗತಿ ಬೆಳಕಿಗೆ ಬಂದಿದೆ.

Key words: mysore-Bike- thief –arrested- 20 two-wheelers -seized.