ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ: 20 ದ್ವಿಚಕ್ರ ವಾಹನಗಳು ವಶಕ್ಕೆ.

ಮೈಸೂರು,ಫೆಬ್ರವರಿ,14,2024(www.justkannada.in): ಮೈಸೂರಿನ ನಜರಬಾದ್ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.

ಬಂಧಿತನಿಂದ 9 ಲಕ್ಷ ರೂಪಾಯಿ ಮೌಲ್ಯದ ಒಟ್ಟು 20 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಪೊಲೀಸರು ಗಸ್ತಿನಲ್ಲಿದ್ದಾಗ  ಆರೋಪಿಯು ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ. ಈ ನಡುವೆ ಪೋರಂ ಮಾಲ್ ಬಳಿ ಡಿಯೋ ಬೈಕ್ ನಲ್ಲಿ ಸಾಗುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದಿರುವ ಬಗ್ಗೆ ಆರೋಪಿ ಒಪ್ಪಿಕೊಂಡಿದ್ದಾನೆ.

ಮೈಸೂರಿನ ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9, ಎನ್ ಆರ್, ಲಷ್ಕರ್, ಕೆ ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದೊಂದು, ಮಂಡ್ಯ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ 4, ಮಂಡ್ಯ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಹಾಗೂ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಒಂದು ದ್ವಿಚಕ್ರ ವಾಹನ ಕದ್ದಿರುವ ಸಂಗತಿ ಬೆಳಕಿಗೆ ಬಂದಿದೆ.

Key words: mysore-Bike- thief –arrested- 20 two-wheelers -seized.