Thursday, September 10, 2026

BDA Apartments

Home Crime ಮೈಸೂರಿನಲ್ಲಿ ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ….

ಮೈಸೂರಿನಲ್ಲಿ ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ….

ಮೈಸೂರು,ಮಾ,6,2020(www.justkannada.in):  ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಿಜೆಪಿ ಮುಖಂಡನನ್ನ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕುವೆಂಪುನಗರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಎಸ್ ಆನಂದ್ ಕೊಲೆಯಾದ ಬಿಜೆಪಿ ಮುಖಂಡ. ಬಿಜೆಪಿ ಮುಖಂಡ ರಾಜೀವ್ ಬೆಂಬಲಿಗ ಎನ್ನಲಾಗಿದೆ. ಕೊಲೆಯಾದ ಎಸ್ ಅನಂದ್ ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡಿದ್ದು ಹುಟ್ಟುಹಬ್ಬದ ಸಂಭ್ರಮದಲ್ಲಿರುವಾಗಲೇ ಬಿಜೆಪಿ ಮುಖಂಡ ಆನಂದ್ ಹತ್ಯೆ ಮಾಡಲಾಗಿದೆ.mysore-bjp-leader-murder-birthday

ಹಳೇ ವೈಷಮ್ಯದ ಮೇಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು. ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದರು. ಜನತಾನಗರದ ಮಾರುತಿ ಟೆಂಟ್ ರಸ್ತೆಯಲ್ಲಿ ಕುಮಾರಸ್ವಾಮಿ ಎಂಬಾತನನ್ನ  ಆನಂದ್ ಮರ್ಡರ್ ಮಾಡಿದ್ದರು.

ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನೆಡೆಸುತ್ತಿದ್ದ ಆನಂದ್ ನಿನ್ನೆ ಸ್ನೇಹಿತರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆದರೆ ಹುಟ್ಟುಹಬ್ಬದ ದಿನವೇ ಹತ್ಯೆಗೀಡಾಗಿದ್ದಾರೆ. ಈ ಕುರಿತು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  mysore-bjp- leader-murder-birthday