Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಅಹೋರಾತ್ರಿ ಧರಣಿ

ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಅಹೋರಾತ್ರಿ ಧರಣಿ

ಮೈಸೂರು,ಆಗಸ್ಟ್,17,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಆರಂಭವಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬಿಜೆಪಿ ಧರಣಿ ನಡೆಸುತ್ತಿದ್ದು ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ನಗರಾಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್ ಸೇರಿ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.

ವಾಲ್ಮೀಕಿ ನಿಗಮದ ಲೂಟಿಯ ರುವಾರಿ ನಾಗೇಂದ್ರ. ಇಂತಹ ನಾಯಕನನ್ನು ಮತ್ತೆ ಸಚಿನನ್ನಾಗಿ ಮಾಡಿಕೊಂಡಿದ್ದಾರೆ. ಕೂಡಲೇ ಬಿ. ನಾಗೇಂದ್ರ ರಾಜೀನಾಮೆ ಕೊಡಲೇಬೇಕು. ಅಲ್ಲಿಯ ತನಕ ನಮ್ಮ ಧರಣಿ ನಿಲ್ಲಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಅಹೋರಾತ್ರಿ ಧರಣಿ valmiki

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿ.ನಾಗೇಂದ್ರ ಅರೆಸ್ಟ್ ಆಗಿದ್ದರು. ಜಾಮೀನು ಪಡೆದು ಹೊರ ಬಂದಿದ್ದಾರೆ. ಇನ್ನು ಕೂಡ ಕೇಸ್ ಮುಗಿದಿಲ್ಲ. ಅಂತವರನ್ನು ಡಿಕೆ ಶಿವಕುಮಾರ್ ಮಂತ್ರಿ ಮಾಡಿದ್ದಾರೆ. ಈ ಕೂಡಲೇ ನಾಗೇಂದ್ರರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಅವರನ್ನು ಕೈಬಿಡುವ ತನಕ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತದೆ ಎಂದು ತಿಳಿಸಿದರು.ಮೈಸೂರು jk02_new jk02 new

Key words: Mysore, BJP, Protest, resignation, Minister, B. Nagendra