ಅಭಿನಂದನಾ ಸಮಾರಂಭ: ಮಾಧ್ಯಮ ಸೇನಾನಿಗಳಿಗೆ ಮೈಸೂರು ಜಿಲ್ಲಾ ಬಿಜೆಪಿ ವತಿಯಿಂದ ಗೌರವ ಸಲ್ಲಿಕೆ….

ಮೈಸೂರು,ಸೆಪ್ಟಂಬರ್,19,2020(www.justkannada.in): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಮಾಧ್ಯಮ ಸೇನಾನಿಗಳಿಗೆ ಮೈಸೂರು ಜಿಲ್ಲಾ ಬಿಜೆಪಿ ಘಟಕ ಹಾಗೂ ಬಿಜೆಪಿ ಮಾಧ್ಯಮ ವಿಭಾಗದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.mysore-bjp-tribute-media-congratulations-ceremony

ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಶಂಕರಮಠದಲ್ಲಿ ಮಾಧ್ಯಮ ಸೇನಾನಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ನಂತರ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಿದ್ದ ಪತ್ರಿಕಾ ಛಾಯಾಗ್ರಾಹಕರು ಹಾಗೂ ದೃಶ್ಯ ಮಾಧ್ಯಮದ ವೀಡಿಯೋ ಗ್ರಾಫರ್ಸ್ ಗಳಿಗೆ ಕಾರ್ಯಕ್ರಮದಲ್ಲಿ ಮೈಸೂರು ಪೇಟ, ಶಾಲು ಹಾರಹಾಕಿ ಅಭಿನಂದನೆ ಸಲ್ಲಿಸಲಾಯಿತು.mysore-bjp-tribute-media-congratulations-ceremony

ಶಾಸಕರಾದ ಎಸ್. ಎ. ರಾಮದಾಸ್, ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್. ವಿ. ರಾಜೀವ್, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರಸೇರಿದಂತೆ ಇತರರು ಉಪಸ್ಥಿತರಿದ್ದರು.

Key words:  Mysore -BJP – tribute -media – Congratulations- Ceremony