ಮೈಸೂರು,ಅಕ್ಟೋಬರ್,24,2026 (www.justkannada.in): ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ಅದ್ದೂರಿಯಾಗಿ ನೆರವೇರಿದ್ದು ನೆರೆದಿದ್ದ ಭಕ್ತರು ರಥೋತ್ಸವ ಕಣ್ತುಂಬಿಕೊಂಡು ಪುನೀತರಾದರು.
ಅಶ್ವಯುಜ ಶುಕ್ಲ ತ್ರಯೋದಶಿ ಉತ್ತರಾಭಾದ್ರ ನಕ್ಷತ್ರದಲ್ಲಿ ಬೆಳಿಗ್ಗೆ 7.55 ರಿಂದ 8:15 ರೊಳಗಿನ ಶುಭ ಮುಹೂರ್ತದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ರಥೋತ್ಸವ ನೆರವೇರಿದ್ದು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗಿದ್ದರು.
ವಿವಿಧ ಬಣ್ಣಗಳ ಬಾವುಟಗಳಿಂದ ವಿಶೇಷ ಅಲಂಕಾರ ಮಾಡಿದ್ದ ಬೃಹದಾಕಾರದ ರಥದಲ್ಲಿ ಚಾಮುಂಡೇಶ್ವರಿ ಅಮ್ಮನವರ ಉತ್ಸವಮೂರ್ತಿ ಇರಿಸಿ ಮೆರವಣಿಗೆ ಮಾಡಲಾಯಿತು. ರಥವು ಚಾಮುಂಡೇಶ್ವರಿ ದೇವಾಲಯವನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಿತು.
ಸುರಿಯುತ್ತಿದ್ದ ಮಳೆಯ ನಡುವೆಯೂ ಜರುಗಿದ ರಥೋತ್ಸವದಲ್ಲಿ ಭಕ್ತರು ತೇರಿನ ಮೇಲೆ ಹಣ್ಣು ಜವನ ಎಸೆದು ಹರಕೆ ತೀರಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
Mysore, Chamudi Hills, Goddess, Chamundeshwari Ratostava






